ಬೆಳಗಾವಿ : ನೇಣುಬಿಗಿದುಕೊಂಡು ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಅಂಜಂ ನಗರದ ನಿವಾಸದಲ್ಲಿ ಘಟನೆ ನಡೆದಿದೆ. ಎಫ್ ಡಿ ಎ ಆಗಿದ್ದ ಜಾಫರ್ ಪೀರ್ಜಾದೆ ( 39) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಡಕಲ್ ಡ್ಯಾಂನ ವಿಶೇಷ ಭೂಸ್ವಾಧಿನಾಧಿಕಾರಿ ರೇಷ್ಮಾ ತಾಳಿಕೋಟಿ ಪತಿ ಜಾಫರ್ ಪೀರ್ಜಾದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೇಷ್ಮಾ ಅವರು ಕೆಲಸದ ಹಿನ್ನೆಲೆ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.