ಕೋಲಾರ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ, ವಿಜಯಮ್ಮ ಅನಾರೋಗ್ಯದಿಂದ ನಿಧನರಾಗಿದ್ದಾರೆ .ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕರಿಯಾಗದೆ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ಪತಿ, ಓರ್ವ ಮಗಳು, ಓರ್ವ ಮಗ ,ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ವಿಜಯಮ್ಮ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.