ಕಾರ್ಕಳ : ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಬಿಂದಾನಗರ ಎಂಬಲ್ಲಿ ವೃದ್ಧೆಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು (ಶುಕ್ರವಾರ) ನಡೆದಿದೆ. ವಿಮಲ ದೇವಾಡಿಗ (85ವ) ಮೃತಪಟ್ಟವರು.
ಅವರು ಸಂಬಂಧಿಕರೊಂದಿಗೆ ಮುಂಬೈನಲ್ಲಿ ವಾಸವಿದ್ದು, ಮದುವೆ ಕಾರ್ಯಕ್ರಮಕ್ಕೆಂದು ಕುಂಟಲ್ಪಾಡಿಯ ಸಂಬಂಧಿಕರ ಮನೆಗೆ ಬಂದಿದ್ದರು. ಶುಕ್ರವಾರ ಮುಂಜಾನೆ ಮನೆಯಲ್ಲಿರುವವರು ದೇವಸ್ಥಾನಕ್ಕೆ ಹೋಗಿ 11 ಗಂಟೆಯ ವೇಳೆಗೆ ಮನೆಗೆ ವಾಪಾಸಾಗುವ ವೇಳೆ ವಿಮಲಾ ಅವರು ಶೌಚಾಲಯದಲ್ಲಿ ಬಿದ್ದಿದ್ದರು.
ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯರು ಪರೀಕ್ಷಿಸಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದಾಗ ವಿಮಲಾ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಗೆ ಅವರು ಮೃತಪಟ್ಟಿದ್ದರು ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.