ದಕ್ಷಿಣ ಕನ್ನಡ: ಕಾಡಾನೆ ದಾಳಿಗೆ ಸಹಿತ ಇಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಎಂಬಲ್ಲಿ ನಡೆದಿದೆ.
ಸ್ಥಳೀಯ ಪೇರಡ್ಕ ಹಾಲು ಸೊಸೈಟಿಯ ಸಿಬ್ಬಂದಿಯಾಗಿರುವ ರಂಜಿತಾ(21) ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಜೊತೆಗೆ ಇದೇ ವೇಳೆ ಸ್ಥಳದಲ್ಲಿದ್ದ ರಮೇಶ್ ರೈ(60) ಎಂಬವರ ಮೇಲೂ ದಾಳಿ ನಡೆಸಿದ್ದು ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ರಂಜಿತಾ ನೆಲ್ಯಾಡಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ಕಳೆದ ಹಲವು ದಿನಗಳಿಂದ ಕಾಡಾನೆ ಉಪಟಳದಿಂದ ಬೇಸತ್ತಿರುವ ಜನರು, ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರು ಆದರೆ ಅಧಿಕಾರಿಗಳು ಮಾತ್ರ ಈ ಬಗ್ಗೆ ಕ್ಯಾರೆ ಅಂದಿಲ್ಲವಂತೆ. ಹೀಗಾಗಿ ಅರಣ್ಯ ಇಲಾಖೆಯ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.