ಮಂಗಳೂರು : ಸಾರ್ವಜನಿಕರಿಂದ ಹಲವು ವಿರೋಧಗಳನ್ನು ಎದುರಿಸುತ್ತಿದ್ದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಎತ್ತಂಗಡಿ ಮಾಡಿರುವ ಸರ್ಕಾರ, ಈಗ ಮಂಗಳೂರು ನಗರಕ್ಕೆ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಪೊಲೀಸ್ ಕಮಿಷನರ್ ಆಗಿ ನಿಯೋಜನೆ ಮಾಡಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಹುದ್ದೆಯಿಂದ ನಿರ್ಗಮಿತರಾದ ಎನ್. ಶಶಿಕುಮಾರ್ ಅವರನ್ನು ರೈಲ್ವೆ ವಿಭಾಗದ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಜೈನ್ ಅವರು ಮಂಗಳೂರಿಗೆ ಪೊಲೀಸ್ ಆಯುಕ್ತರಾಗಿ ಬಂದಿದ್ದಾರೆ.