ಕಾರ್ಕಳ:ಗೆಳೆಯರೊಂದಿಗೆ ವಾಲಿಬಾಲ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಶ್ರೀದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದಿದೆ.
ಕುಕ್ಕುಂದೂರು ಗ್ರಾಮದ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಬಳಿ ನಿವಾಸಿ ಸಂತೋಷ್ (34) ಎಂಬವರು ಮೃತಪಟ್ಟ ಯುವಕ.
ಫೆ.25ರ ಸಂಜೆ ಎಂದಿನಂತೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಏಕಾಎಕಿ ಎದೆನೋವು ಕಾಣಿಸಿಕೊಂಡು ಸಂತೋಷ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸಂತೋಷ್ ಎಲೆಕ್ಟ್ರಿಶಿಯನ್ ಕೆಲಸ ನಡೆಸುತ್ತಿದ್ದು, ಇವರಿಗೆ ಕಳೆದ 5 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ