ಶಿವಮೊಗ್ಗ : ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಪ್ರಧಾನಿ ಮೋದಿ ಶಿಮುಲ್, ಹಾಲು ಪ್ಯಾಕಿಂಗ್ ಘಟಕ ಉದ್ಘಾಟಿಸಿದರು.
ಸ್ಮಾರ್ಟ್ಸಿಟಿ ಕಾಮಗಾರಿ, ಶಿಮುಲ್ ಹಾಲು ಪ್ಯಾಕಿಂಗ್ ಘಟಕ, ಮಾಮ್ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.
ವಿಮಾನ ನಿಲ್ದಾಣ ಉದ್ಘಾಟಿಸಿ ಕನ್ನಡದಲ್ಲೇ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭಿಸಿದ್ದಾರೆ. ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರ. ಸಿರಿಗನ್ನಡಂ ಗೆಲ್ಗೆ ಸಿಗನ್ನಡಂ ಬಾಳ್ಗೆ ಎಂದು ರಾಷ್ಟ್ರಕವಿ ಕುವೆಂಪು ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು. ಶಿವಮೊಗ್ಗದಿಂದ ನಾನು ಬೆಳಗಾವಿಗೆ ಹೋಗಬೇಕಿದೆ. ಶಿವಮೊಗ್ಗದ ಬಹುದಿನದ ಬೇಡಿಕೆ ಈಗ ಈಡೇರಿದೆ. ಶಿವಮೊಗ್ಗಕ್ಕೆ ವಿಮಾನ ನಿಲ್ದಾಣದ ದೊರೆತಿದೆ. ಇಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ ಎಂದರು.
ವೇದಿಕೆ ಮೇಲೆ ಭಾಷಣದ ಮೇಲೆ ನರೇಂದ್ರ ಮೋದಿಯವರು ನೆರದಿದ್ದ ಜನರಿಗೆ ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಬಿಎಸ್ ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಲು ಹೇಳಿದರು. ಬಿಎಸ್‌ವೈ ವಿಧಾನಸಭೆಯಲ್ಲಿ ಭಾಷಣ ಮಾಡಿದ್ರು. ಇದು ಎಲ್ಲರಿಗೂ ಪ್ರೇರಣೆ ನೀಡುವಂಥದ್ದಾಗಿದ್ದೆ. ೫೦ ವರ್ಷಗಳಿಂದ ಯಡಿಯೂರಪ್ಪನವರು ಜನಸೇವೆಯಲ್ಲಿದ್ದಾರೆ. ಕರ್ನಾಟಕದ ಅಭಿವೃದ್ಧಿ ರಥದಲ್ಲಿ ಅಭಿವೃದ್ಧಿ ಪಥವಿದೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದರು.
ಕರ್ನಾಟಕದ ಅಭಿವೃದ್ಧಿ, ಅಭಿವೃದ್ಧಿ ರಥದ ಪಥದಲ್ಲಿ ಸಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ. ೨೦೧೪ರಕ್ಕಿಂತ ಮೊದಲು ಕೇವಲ ದೊಡ್ಡ ನಗರಗಳಿಗೆ ಮಾತ್ರ ವಿಮಾನ ನಿಲ್ದಾಣ ಸೀಮಿತವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಲ್ಲಿಯೂ ಏರ್‌ಪೋರ್ಟ್ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಬಡವನು ಕೂಡ ವಿಮಾನಯಾನ ಮಾಡುವಂತಾಗಬೇಕು. ಹೀಗಾಗಿ ಕಡಿಮೆ ಮೆಚ್ಚದಲ್ಲಿ ಟಿಕೆಟ್ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ. ಇವರು ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟಿಸಿರುವುದು ಸಂತಸ ತಂದಿದೆ. ಕೊಟ್ಟ ಮಾತಿನಂತೆ ಏರ್‌ಪೋರ್ಟ್ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು. ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್? ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.
ಮುಖ್ಯಮAತ್ರಿ ಬಸವರಾಜ ಬೊಮ್ಮಾಯಿ ತಮ್ಮ ಭಾಷಣದ ವೇಳೆ ನರೇಂದ್ರ ಮೋದಿಯವರನ್ನು ಹೊಗಳಿ ಕೊಂಡಾಡಿದ್ದಾರೆ. ಕರ್ನಾಟಕ ಆರ್ಥಿಕತೆ ಜೊತೆಗೆ ಸಾಮಾಜಿಕವಾಗಿ ಅಭಿವೃದ್ಧಿಯಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರದಿಂದ ದೇಶ ಅಭಿವೃದ್ಧಿಯತ್ತ ಮುನ್ನುಗುತ್ತಿದೆ ಎಂದರು.
ಸಮಾರAಭ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಪ್ರಧಾನಿ ಮೋದಿ ಹಸಿರು ಶಾಲು ಹೊದಿಸಿ, ಅಡಕೆ ಹಾರ ಹಾಕಿ, ಪೇಟ ತೊಡಿಸಿ, ನೇಗಿಲು ನೀಡಿ ಸನ್ಮಾನಿಸಿದರು.
ಮೋದಿಗೆ ಶಾಲು ಹೊದಿಸಿ ಈಶ್ವರಪ್ಪ ಸನ್ಮಾನಿಸಿದರು. ಅಡಕೆ ಹಾರ ಹಾಕಿ ಸಂಸದ ಬಿ.ವೈ.ರಾಘವೇಂದ್ರ ಸ್ವಾಗತಿಸಿದರು. ಹಾಗೂ ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಪ್ರಧಾನಿ ಮೋದಿಗೆ ಶಿವಮೊಗ್ಗ ಏರ್‌ಪೋರ್ಟ್ ಕಲಾಕೃತಿ ಕಾಣಿಕೆ ನೀಡಿದ್ದಾರೆ.
ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್, ಸಿ.ಸಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.