Share this news

ಬೆಂಗಳೂರು (ಫೆ.1): ಏಳನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ(ಎನ್‌ಪಿಎಸ್‌) ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಈಡೇರಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರಕಾರ  ಸರಕಾರಿ ನೌಕರರಿಗೆ  ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳಕ್ಕೆ  ಒಪ್ಪಿಗೆ ಸೂಚಿಸಿದೆ. ಈ ಮೂಲಕ ಸರಕಾರಿ ನೌಕರರಿಗೆ ಬಂಪರ್ ಗಿಫ್ಟ್ ಸಿಕ್ಕಿದೆ. ಜೊತೆಗೆ ನೌಕರರ ಪ್ರತಿಭಟನೆಯನ್ನು ಹಿಂಪಡೆಯಲು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. NPS ಬಗ್ಗೆ ಬೇರೆ ರಾಜ್ಯಗಳಲ್ಲಿ ಏನ್ ಆಗಿದೆ ಎಂದು ವರದಿ ತರೆಸಿಕೊಳ್ಳುತ್ತೇವೆ. ACS ನೇತೃತ್ವದಲ್ಲಿ ಸಮಿತಿ ಮಾಡಿ ಎರಡು ತಿಂಗಳಲ್ಲಿ ವರದಿ ತರೆಸಿಕೊಳ್ಳುತ್ತೇವೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಹೇಳಿರುವ ಬೊಮ್ಮಾಯಿ ಮುಷ್ಕರ ಕೈಬಿಡ್ತಾರೆ ಎಂಬ ವಿಶ್ಚಾಸ ಇದೆ ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಡಿರುವ ಘೋಷಣೆಗೆ ಪ್ರತಿಕ್ರಿಯೆ ನೀಡಿರುವ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು, ಆದೇಶ ಪ್ರತಿ ಬಂದ ಬಳಿಕವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸರಕಾರದ ಭರವಸೆಯ ಮಾತಿಗೆ ನಾವು ಒಪ್ಪಿಗೆ ಸೂಚಿಸುವುದಿಲ್ಲ. ಕೇವಲ ಬಾಯಿ ಮಾತಿನ ಭರವಸೆ ನಮಗೆ ಬೇಡ. ಅಲ್ಲಿಯವರೆಗೆ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ. ಆರ್ಥಿಕ ಇಲಾಖೆ ಅಧಿಕಾರಿಗಳು ಸಭೆಗೆ ಕರೆದಿದ್ದು, ಸಭೆ ಬಳಿಕ ಮುಂದಿನ ನಿರ್ಧಾರದ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *