Share this news

ಬೆಂಗಳೂರು: 2022-23ನೇ ಸಾಲಿನ 5 ಮತ್ತು 8ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಪ್ರವೇಶ ಪತ್ರದ ಮಾದರಿಯನ್ನು ಶಿಕ್ಷಣ ಇಲಾಖೆಯಿಂದ  ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ಕಾರ್ಯ ನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ. 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ 13-03-2023ರಿಂದ ಮೌಲ್ಯಾಂಕನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾ.13ರಿಂದ ಆರಂಭಗೊಳ್ಳುತ್ತಿರುವಂತ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆಗೆ ಪ್ರವೇಶ ಪತ್ರದ ಮಾದರಿಯನ್ನು ದಿನಾಂಕ 04-03-2023ರ ಇಂದಿನಿಂದ ಮಂಡಳಿಯ ವೆಬ್ ಸೈಟ್ https://kseab.karnataka.gov.in ನಲ್ಲಿ ಪ್ರಕಟಿಸಲಾಗಿರುತ್ತದೆ. ಈ ಪ್ರವೇಶ ಪತ್ರಗಳನ್ನು ಶಾಲೆಯ ಮುಖ್ಯ ಶಿಕ್ಷಕರು ಡೌನ್ ಲೋಡ್ ಮಾಡಿಕೊಂಡು, ವಿದ್ಯಾರ್ಥಿಯ ಹೆಸರು, SATS ID, ಶಾಲೆಯ ಡೈಸ್ ಸಂಕೇತ ಮತ್ತು ವಿಳಾಸ, ಕೇಂದ್ರದ ಡೈಸ್ ಸಂಕೇತ ಮತ್ತು ವಿಳಾಸ ಬರೆದು, ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸುವಂತೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *