ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯ ಮಡಿಕೇರಿ ಮೂಲದ ತೌಫಿಕ್ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದು, ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದರು. ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಅಡಗಿರುವ ಬಗ್ಗೆ ಜಾಡು ಹಿಡಿದ ತನಿಖಾ ದಳ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಹಿನ್ನೆಲೆ:
ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಹಿಂದು ಒಬ್ಬನ ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್‌ಐ ಹೊಂದಿತ್ತು. ಕೆಲವೇ ದಿನಗಳಲ್ಲಿ ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರು ಸಂಚು ರೂಪಿಸಿ ಪ್ರವೀಣ್ ನೆಟ್ಟಾರು ಅವರನ್ನು ಟಾರ್ಗೆಟ್ ಮಾಡಿದ್ದರು.
ಮಾಡಿದ್ದ ಪ್ಲಾನ್‌ನಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಮೇಲೆ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದಾಗ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ಬಳಿಕ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿತ್ತು. ಹತ್ಯೆ ಮಾಡಿದ್ದ ಆರೋಪಿಗಳು ನಾಪತ್ರೆಯಾಗಿದ್ದರು. ಎನ್‌ಐಎ ತನಿಖಾ ತಂಡ ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿತ್ತು.