ಬೆಂಗಳೂರು : ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, H3N2 ಸೋಂಕಿನಿಂದ 15 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚು ಅಪಾಯವಿದೆ. 60 ವರ್ಷ ಮೆಲ್ಪಟ್ಟವರಿಗೂ ಇದು ಸುಲಭವಾಗಿ ಹರಡುತ್ತೆ. ಗರ್ಭಿಣಿಯರು ಹೆಚ್ಚು ಎಚ್ಚರಿಕೆ ವಹಿಸಬೇಕು. ರಾಜ್ಯದ ಜನರು ಹೆಚ್ಚು ಜಾಗೃತವಾಗಿರಬೇಕು. ಸೀನುವಾಗ ಕೆಮ್ಮುವಾಗ ಮುನ್ನೇಚ್ಚರಿಕೆ ವಹಿಸಬೇಕು ಎಂದು ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ H3N2 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. H3N2 ಸೋಂಕಿನ ಬಗ್ಗೆ ಯಾರೂ ಗಾಬರಿಪಡಬೇಕಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಂದಿನಿಂದಲೇ ಆರೋಗ್ಯ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ರಾಜ್ಯದಲ್ಲಿ H3N2 26 ಸೋಂಕು ಪತ್ತೆಯಾಗಿವೆ ಎಂದು ಹೇಳಿದ್ದಾರೆ.