ಕಾರ್ಕಳ : ಕಾರ್ಕಳ ತಾಲೂಕು ಪಳ್ಳಿ ಗ್ರಾಮದ ಹಂಪನಕಟ್ಟೆ ಎಂಬಲ್ಲಿ ಬೈಕಿಗೆ ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾರೆ.
ರಿತೇಶ್ಎಂಬವರು ಭಾನುವಾರ ರಾತ್ರಿ 11.30 ರ ವೇಳೆಗೆ ಬೈಕಿನಲ್ಲಿ ಉಡುಪಿ ಕಡೆಯಿಂದ ಪಳ್ಳಿ ಕಡೆಗೆ ಹೋಗುತ್ತಿದ್ದಾಗ ಪಳ್ಳಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರಾಕೇಶ್ ರೈ ಎಂಬವರ ಕಾರು ಢಿಕ್ಕಿಯಾಗಿದೆ. ಅಪಘಾತದ ಪರಿಣಾಮ ರಿತೇಶ್ ಬೈಕ್ ಸಹಿತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.