ಬೆಳಗಾವಿ : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕರು ಶಾಸಕರಿಗೆ ಟಿಕೆಟ್ ಇಲ್ಲ ಎಂಬ ಹೇಳಿಕೆ ವಿಚಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನಿಡಿದ್ದು, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಸಂಬಂಧ ಹೈಕಮಾಂಡ್ ಹಾಗೂ ಚುನಾವಣಾ ಸಮಿತಿಯಲ್ಲಿ ಚರ್ಚೆ ಆಗುತ್ತದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಕೊಡಬೇಕೆಂದು ತೀರ್ಮಾನಿಸುತ್ತಾರ. ಈ ವಿಚಾರ ಸದ್ಯಕ್ಕೆ ಯಾವುದೇ ಮಹತ್ವ ಇಲ್ಲ ಎಂದರು.
ನಾಲ್ಕಾರು ಶಾಸಕರಿಗೆ ಟಿಕೆಟ್ ಸಿಗಲ್ಲ ಎನ್ನುವ ವಾತವಾರಣ ಇದೆ. ಟಿಕೆಟ್ ವಿಚಾರವಾಗಿ ಹೈಕಮಾಂಡ್ ತೀರ್ಮಾನವೇ ಫೈನಲ್, ಆ ರೀತಿ ಆಗಬಹುದು ಎಂದು ನಾನು ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ.ಚುನಾವಣೆಯಲ್ಲಿ ಎಲ್ಲರಿಗೂ ಟಿಕೆಟ್ ಸಿಕ್ಕರೂ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ.