ಬೆಂಗಳೂರು : ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬಂದ್ರೆ ಪ್ರವೇಶವಿಲ್ಲ ಸಮವಸ್ತ್ರ ಕಡ್ಡಾಯ ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಇಂದು ನಡೆದ ಮಹತ್ವದ ಸಭೆ ಬಳಿಕ ಸಚಿವರು ಮಾತನಾಡಿ, 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿವೆ. ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಈ ವ್ಯವಸ್ಥೆ ಮಾಡಿದ್ದೇವೆ. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 5,716 ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗೆ 726195 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಒಟ್ಟು 5716 ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು, 1109 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 1109 ಸಹ ಅಧೀಕ್ಷಕರು. 64 ಜಿಲ್ಲಾ ಜಾಗೃತ ದಳ. 525 ತಾಲೂಕು ಜಾಗೃತ ದಳ, 2373 ವಿಶೇಷ ಜಾಗೃತ ದಳ ಕರ್ತವ್ಯ ನಿರ್ವಹಿಸಲಿದೆ.