ಕಾರ್ಕಳ : ಕಳೆದ ಹಲವು ವರ್ಷಗಳಿಂದ ಗಣಿಗಾರಿಕೆಗೆ ಎದುರಾಗಿದ್ದ ಕಾನೂನು ತೊಡಕನ್ನು ನಿವಾರಿಸಿ ಕಾನೂನು ಬದ್ಧ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.
ಕಳೆದ ಒಂದು ವರ್ಷದಿಂದ ಕರ್ನಾಟಕ ಫೆಡರೇಷನ್ ಆಫ್ ಕ್ವಾರಿ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ನಿನ್ನೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಗಣಿಗಾರಿಕೆ ನಡೆಸಲು ಕಾನೂನು ನಿಯಮಗಳಲ್ಲಿ ಇದ್ದ ತೊಡಕನ್ನು ನಿವಾರಿಸಿ ಸರಕಾರ ಆದೇಶ ಹೊರಡಿಸಿದ್ದು, ಆದಾಯ ಗಣಿ ಉದ್ಯಮ ಸಕ್ರಮ ಹಾಗೂ ಜನರ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಪೂರಕವಾದ ಅಂಶಗಳನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.