Share this news

ಬೆಂಗಳೂರು :ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 65 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​ಪೋರ್ಟ್​ನಲ್ಲಿ ನಡೆದಿದೆ.

ಕಸ್ಟಮ್ಸ್​ ಅಧಿಕಾರಿಗಳ ಕಾರ್ಯಾಚರಣೆ ಮಾಡಿ ಬಹ್ರೇನ್​​ನಿಂದ ಬೆಂಗಳೂರಿಗೆ G280 ವಿಮಾನದಲ್ಲಿ ಬಂದಿದ್ದ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ವಿದೇಶದಿಂದ ಸೋಪ್ ಮಾದರಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಕಸ್ಟಮ್ಸ್​ ಅಧಿಕಾರಿಗಳ ತಂಡ 65 ಲಕ್ಷ ಮೌಲ್ಯದ 1 ಕೆಜಿ 171 ಗ್ರಾಂ ಚಿನ್ನ  ಸಹಿತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *