Share this news

ಬೆಂಗಳೂರು: 7ನೇ ವೇತನ ಆಯೋಗದ ಅನುಷ್ಠಾನ, ಎನ್ ಪಿಎಸ್ ರದ್ದುಗೊಳಿಸಿ, ಒಪಿಸಿಎಸ್ ಜಾರಿ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕೆಲ ದಿನಗಳ ಹಿಂದೆ ಕರೆ ನೀಡಿದ್ದರು. ಸರ್ಕಾರ ಒಂದೇ ದಿನದಲ್ಲಿ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿತ್ತು. ಒಪಿಎಸ್ ಜಾರಿ ಸಂಬAಧ ಸಮಿತಿ ರಚಿಸಲಾಗಿತ್ತು. ಇಂದು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ, ಪರಿಷ್ಕೃತ ಆದೇಶವನ್ನು ಹೊರಡಿಸಿದೆ.

ಈ ಕುರಿತು ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿಯನ್ನು ಹೊರಡಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬAಧ ಪರಿಷ್ಕೃತ ಆದೇಶವನ್ನು ಹೊರಡಿಸಿದ್ದಾರೆ.

ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಸಂಜೀವಿನಿ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲತಾಯಿನ್ನೊಳಗೊಂಡAತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ ಕನಿಷ್ಠ ಕುಟುಂಬ ಪಿಂಚಣಿ( ರೂ.8,500) ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ ಯೋಜನೆಗೆ ಅರ್ಹರು ಎಂದಿದೆ.

ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು. ಇವರಲ್ಲಿ ದತ್ತು ಪಡೆ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡAತೆ ಕುಟುಂಬದ ಸದಸ್ಯರನ್ನು ಯೋಜನೆಯಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

 

Leave a Reply

Your email address will not be published. Required fields are marked *