ಹೆಬ್ರಿ : ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ 9 ಮಂದಿ ಸಾಧಕಿಯರಿಗೆ ಸಾವಿತ್ರಿ ಸತ್ಯವಾನ್ ಸಾಧಕ ಮಹಿಳೆ-2023 ಪ್ರಶಸ್ತಿ ಪ್ರದಾನ ಸಮಾರಂಭ ಮಾ.12 ರಂದು ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ನಡೆಯಲಿದೆ ಎಂದು ಸಾವಿತ್ರಿ ಸತ್ಯವಾನ್ ಟ್ರಸ್ಟ್ ನ ಸಂಸ್ಥಾಪಕಿ ಡಾ.ಮಮತಾ ಹೆಗ್ಡೆ ತಿಳಿಸಿದ್ದಾರೆ.

ಶಿಕ್ಷಕಿ ಪೂರ್ಣಿಮಾ ಶೆಣೈ,ಸಾಹಿತಿ ಚೈತ್ರಾ ಕಬ್ಬಿನಾಲೆ,ನಾಟಿ ವೈದ್ಯೆ ಜಯಂತಿ ಮಾಳ,ವಿಜೇತ ವಿಶೇಷ ಶಾಲೆಯ ಸಂಸ್ಥಾಪಕಿ ಡಾ.ಕಾಂತಿ ಹರೀಶ್,ಕೃಷಿ ಕ್ಷೇತ್ರದ ಸಾಧಕಿ ಸುಮಲತಾ ಮಾಳ,ಸಂಗೀತ ಕ್ಷೇತದ ಸಾಧಕಿ ಆರತಿ,ಸಮಾಜ ಸೇವಕಿ ಗಾಯತ್ರಿ ಪ್ರಭು,ಸುರಕ್ಷಾ ಸೇವಾಶ್ರಮದ ಆಯೇಷಾ ಭಾನು,ಶಿಕ್ಷಕಿ ಗೀತಾ ಎಸ್ ಹೆಗ್ಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

