ಹೆಬ್ರಿ : ಹೆಬ್ರಿಯ ಚಾರಾ ಲಯನ್ಸ್ ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಬೈಕ್ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸತೀಶ್ ಕುಲಾಲ್ ಎಂಬವರು ಮಾ.8ರಂದು ಸಂಜೆ ತಮ್ಮ ಬೈಕಿನಲ್ಲಿ ಹೆಬ್ರಿಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದಾಗ ಚಾರ ಲಯನ್ಸ್ ಸರ್ಕಲ್ ಬಳಿಯ ಪೆಟ್ರೋಲ್ ಬಂಕ್ ಎದುರುಗಡೆ ರಸ್ತೆಯಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಸತೀಶ್ ಕುಲಾಲ್ ಅವರು ಬೈಕ್ ಸಹಿತ ರಸದತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.