Share this news

ಮಂಗಳೂರು : ತುಳುನಾಡಿನ ಆರಾಧ್ಯ ದೈವ ಗುಳಿಗನ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ತೀರ್ಥಹಳ್ಳಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಅಪಮಾನ ಮಾಡಿದ್ದು, ಅವರು ತುಳುನಾಡಿಗೆ ಬಂದು ಬೇಷರತ್‌ ಕ್ಷಮೆ ಕೇಳಬೇಕು ಎಂದು ಬೆಳ್ತಂಗಡಿಯ ನಲಿಕೆಯವರ ಸಮಾಜ ಸೇವಾ ಸಂಘ ಆಗ್ರಹಿಸಿದೆ. ಒಂದು ವಾರದೊಳಗೆ ಕ್ಷಮೆ ಕೇಳದಿದ್ದರೆ, ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಂಘದ ಅಧ್ಯಕ್ಷ ಎಸ್‌.ಪ್ರಭಾಕರ್‌ ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ, ಗುಳಿಗ ದೈವಕ್ಕೆ ಅವಮಾನ ಮಾಡಿರುವುದು ತುಳುನಾಡಿನ ದೈವಾರಾಧಕರು ಹಾಗೂ ತುಳು ಜನತೆಗೆ ಮಾಡಿದ ಅಪಮಾನವಾಗಿದೆ. ಇತ್ತೀಚೆಗೆ ಉಡುಪಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಪಂಜುರ್ಲಿ, ಗುಳಿಗ ಎಲ್ಲ ದೈವಗಳು ಬಿಜೆಪಿ ಪರವಾಗಿವೆ ಎಂದು ಮಾತನಾಡಿದ್ದಾರೆ. ಕಾಂತಾರ ಸಿನಿಮಾದಿಂದ ನಮ್ಮ ಮೂಲ ದೈವಾರಾಧಣೆಗೆ ಎಲ್ಲ ಕಡೆಗಳಲ್ಲಿ ಸಭೆ, ಸಮಾರಂಭಗಳಲ್ಲಿ ಅವಮಾನ ಆಗುತ್ತಲೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *