ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬೈರ್ಲಬೆಟ್ಟುಗುತ್ತು ಹಾಡಿ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಮಾರ್ಚ್ 21ರಂದು ಪತ್ತೆಯಾಗಿದೆ.
ಕುಕ್ಕುಂದೂರಿನ ಭರತ್ ಶೆಟ್ಟಿ ಎಂಬವರು ಮಾರ್ಚ್ 21ರಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಬೈರ್ಲಬೆಟ್ಟುಗುತ್ತು ಹಾಡಿ ಪ್ರದೇಶದ ಬಳಿ ನಡೆದುಕೊಂಡು ಹೋಗುತ್ತಿರುವ ವೇಳೆ ವಿಪರೀತ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಭರತ್ ಶೆಟ್ಟಿ ಅವರು ಹಾಡಿಯ ಬಳಿ ಹೋಗಿ ನೋಡಿದಾಗ ಸುಮಾರು 30 ರಿಂದ 35 ವರ್ಷ ಪ್ರಾಯದ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಮರದ ಕೊಂಬೆಯಲ್ಲಿ ನೇತಾಡುತ್ತಿರುವುದು ಪತ್ತೆಯಾಗಿದೆ.
ಅಪರಿಚಿತ ವ್ಯಕ್ತಿಯೊಬ್ಬರು ಯಾವುದೋ ಕಾರಣದಿಂದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.