ದಕ್ಷಿಣಕನ್ನಡ: ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು, ಉಗ್ರ ಕೃತ್ಯಕ್ಕೆ ಬಳಸುತ್ತಿದ್ದ ಸುಳ್ಯ ಪಟ್ಟಣದ ಗಾಂಧಿನಗರದಲ್ಲಿರುವ ಪಿಎಫ್‌ಐ ಕಚೇರಿಯನ್ನುಎನ್‌ಐ ಎ ಅಧಿಕಾರಿಗಳು ಜಪ್ತಿ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸುತ್ತಿದ್ದ ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಕೆ ಬಳಸಲಾಗುತ್ತಿದ್ದ ಸುಳ್ಯ ಪಿಎಫ್‌ಐ ಕಚೇರಿಯನ್ನು ಎನ್‌ಐ ಎ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ. ಇದೇ ಕಚೇರಿಯಲ್ಲಿ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಲಾಗುತ್ತಿತ್ತು.
ಎನ್‌ಐಎ ವಶದಲ್ಲಿರುವ ಆ ಜಾಗವನ್ನು ಪರಬಾರೆ ಮಾಡುವಂತಿಲ್ಲ. ಜಪ್ತಿಯಾದ ಕಚರಿಯನ್ನು ಬಾಡಿಗೆ , ಲೀಜ್‌ಗೆ ಕೊಡುವಂತಿಲ್ಲ. ಕಚೇರಿಯಲ್ಲಿರುವ ಯಾವುದೇ ವಸ್ತುಗಳನ್ನು ಸಾಗಿಸುವುದನ್ನು ನಿಷೇಧಿಸಲಾಗಿದೆ. ಮಾಲೀಕರು. ದಕ್ಷಿಣಕನ್ನಡ ಡಿಸಿ, ಎಸ್‌ಪಿಗೆ ಅರ್ಡರ್ ಕಾಪಿ ರವಾನೆ ಮಾಡಲಾಗಿದೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಈ ಬೆನ್ನಲ್ಲೆ ಕರಾವಳಿ ನಗರದೆಲ್ಲೆಡೆ ಬೂದಿ ಮುಚ್ಚಿದ ಕೆಂಡದಂತಾದ ಪರಿಸ್ಥಿತಿ ನಿರ್ಮಾಣವಾಗಿತ್ತು