ಬೆಂಗಳೂರು : ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರ್ಪಡೆಯಾಗಿರುವ ತಳವಾರ ಮತ್ತು ಪರಿವಾರ ಜಾತಿಗಳನ್ನು ರಾಜ್ಯದ ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿನ ಪರಿವಾರ ಮತ್ತು ತಳವಾರ ಜಾತಿಗಳನ್ನು ಸೇರಿಸಿರುವ ಹಿನ್ನೆಲೆಯಲ್ಲಿ ಸದರಿ ಜಾತಿಗಳಿಗೆ ಸರ್ಕಾರವು ಪರಿಶಿಷ್ಟ ಪಂಗಡದ ಪ್ರಮಾಣ ಪತ್ರಗಳನ್ನು ವಿತರಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿರುತ್ತದೆ. ಹೀಗಾಗಿ ತಳವಾರ ಮತ್ತು ಪರಿವಾರ ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ಕೈಬಿಡಲಾಗಿದೆ.
ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯ ಪ್ರವರ್ಗ-1ರಲ್ಲಿನ ತಳವಾರ ಜಾತಿ ಮತ್ತು ಪರಿವಾರ ನಾಯಕ ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದು ತೆಗೆದು ಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ