ಕಾರ್ಕಳ:ನಿರೀಕ್ಷೆಯಂತೆ ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಿದ್ದಾರೆ.
ಕಾರ್ಕಳ ಚುನಾವಣಾಧಿಕಾರಿ ಮದನ್ ಮೋಹನ್ ಅವರು ಖುದ್ದಾಗಿ ಬುಧವಾರ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಹೆಬ್ರಿ ಸೋಮೇಶ್ವರ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ವಾಹನಗಳನ್ನು ತಪಾಸಣೆ ನಡೆಸಿ,ಚುನಾವಣಾ ಅಕ್ರಮಗಳು ನಡೆಯದಂತೆ ಸೆಕ್ಟರ್ ಅಧಿಕಾರಿಗಳು ಹಾಗೂ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹೆಬ್ರಿ ತಹಶಿಲ್ದಾರ್ ಪುರಂದರ ಉಪಸ್ಥಿತರಿದ್ದರು