Share this news

ಬೆಳ್ತಂಗಡಿ : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ  ಬೆಳ್ತಂಗಡಿ  ಬಿಜೆಪಿ ಶಾಸಕ ಹರೀಶ್ ಪೂಂಜ  ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅವರು ಪತ್ರಿಕೆಗೆ ಹಣ ಕೊಟ್ಟು ಹರೀಶ್ ಪೂಂಜ  ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ ಎಂದು ಬಿಂಬಿಸಿ ಜಾಹೀರಾತು ನೀಡಿದ್ದಾರೆ. ಹಾಗೂ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಗ್ರಾಮ ವಿಕಾಸ ಹಬ್ಬದ ಹೆಸರಿನಲ್ಲಿ ಮಾ.30 ರಂದು ಬಲಿಂಜೆ ಎಂಬಲ್ಲಿ ಸಭಾ ಕಾರ್ಯಕ್ರಮ ನಡೆಸಿ ಬಳಿಕ ಜನರಿಗೆ ಊಟೋಪಚಾರ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *