ನವದೆಹಲಿ: ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯ ಸುದೀರ್ಘ ಚರ್ಚೆಯ ಬಳಿಕ, ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದ್ದು, ಇಂದು 40 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಘೋಷಣೆ ಮಾಡಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಕ್ರೀನಿಂಗ್ ಕಮಿಟಿಯ ಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 40 ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದೆ ಎಂದರು. ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷದಿಂದ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಇಂದು ಕಾಂಗ್ರೆಸ್ ಪಕ್ಷದಿಂದ 40 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಇಂದು ತಡರಾತ್ರಿ ಕಾಂಗ್ರೆಸ್ ಪಕ್ಷದಿಂದ 40 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಯಾರಿಗೆಲ್ಲ ಟಿಕೆಟ್ ಸಿಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.