Share this news

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು  ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ  ಮುಕ್ತಾಯದ ನಂತರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ . ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ರಾಜ್ಯಾಧ್ಯಂತ ಏಕರೂಪದ ಯಶಸ್ವಿ ಅನುಷ್ಠಾನಕ್ಕಾಗಿ ವಾರ್ಷಿಕ  ಶಿಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

ಶಿಕ್ಷಣ ಇಲಾಖೆಯ  ಮಾರ್ಗಸೂಚಿಯಂತೆ ವಾರ್ಷಿಕ, ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು, ಪರೀಕ್ಷೆ ಹಾಗೂ ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಮಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಮೆ ಹಾಗೂ ವಿವಿಧ ಶಾಲಾ ಹಂತದ ಸಿಸಿ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ದಿನಾಂಕ 29-05-2023ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿತ್ತು. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳ್ನು ಜಾರಿಗೊಳಿಸಲು ಅನುಕೂಲವಾಗುವಂತೆ ಶೈಕ್ಷಣಿಕ ಅವಧಿಗಳು, ರಜಾ ದಿನಗಳು ಮತ್ತು ವಾರ್ಷಿಕ ಕಾರ್ಯಸೂಚಿಯನ್ನು ನಿಗಧಿಪಡಿಸಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದ್ದಾರೆ.

Leave a Reply

Your email address will not be published. Required fields are marked *