ಮೈಸೂರು: ಕಳೆದ ತಿಂಗಳು ಮಾರ್ಚ್ 11 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ವಿಧಿವಶರಾಗಿದ್ದಾರೆ. ಇದು ಇಡೀ ಕುಟುಂಬಕ್ಕೆ ಆಘಾತವುಂಟು ಮಾಡಿತ್ತು. ನಂತರ ಆರ್.ಧ್ರುವನಾರಾಯಣ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಈ ಖುಷಿಯಲ್ಲಿದ್ದ ಕುಟುಂಬಕ್ಕೆ ಈಗ ಮೊತ್ತೊಂದು ಆಘಾತವುಂಟಾಗಿದೆ. ಪತಿ ದಿವಂಗತ ಆರ್.ಧ್ರುವನಾರಾಯಣ ನಿಧನರಾಗಿ ಒಂದು ತಿಂಗಳು ಕಳೆಯುವದರ ಒಳಗಾಗಿ ಪತ್ನಿ ವೀಣಾ ಧ್ರುವನಾರಾಯಣ್ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಅವರನ್ನು ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಇಂದು (ಏ.7) ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ.