ಕಾರ್ಕಳ : ತಾಲೂಕಿನ ಮಾಳ ಗ್ರಾಮದ ಮಾಳ-ಶೃಂಗೇರಿ ರಾಷ್ಟ್ರೀಯ ಹೆದ್ದಾರಿಯ ಕೂಡಬೆಟ್ಟು ತಿರುವಿನಲ್ಲಿ ಗುರುವಾರ ರಾತ್ರಿ ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭಿರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಬೈಕ್ ಸವಾರ ಮಾಳ ಚೆಕ್‌ಪೋಸ್ಟ್ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದಾಗ ಬಜಗೋಳಿಯಿಂದ ಮಾಳ ಕಡೆಗೆ ಹೋಗುತ್ತಿದ್ದ ಟೆಂಪೋಗೆ ಡಿಕ್ಕಿಯಾದ ಪರಿಣಾಮ ಬೈಕ್ ಸಹಿತ ಸವಾರ ರಸ್ತೆಗೆ ಬಿದ್ದಿದ್ದಾನೆ, ಅಪಘಾತದ ರಭಸಕ್ಕೆ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.