Share this news

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಕೊಡಗು, ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

ಮಳೆ ವಾತಾರಣ ಉಂಟಾದ ಹಿನ್ನೆಲೆಯಲ್ಲಿ ಒಂದೆರಡು ದಿನ ಉಷ್ಣಾಂಶದಲ್ಲಿ ಇಳಿಕೆಯಾಗಿತ್ತು. ಇದೀಗ ಮತ್ತೆ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಗುರುವಾರ ಈವರೆಗಿನ ಬೇಸಿಗೆಯ ಅತಿಹೆಚ್ಚು ಉಷ್ಣಾಂಶ ದಾಖಲಾಗಿದೆ. ಕಳೆದ ಏಪ್ರಿಲ್ 5 ರಿಂದ ಏ.11  ರ ಅವಧಿಯಲ್ಲಿ ಒಟ್ಟು 6 ದಿನ 40 ಡಿಗ್ರಿಗೂ ಅಧಿಕ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

 

Leave a Reply

Your email address will not be published. Required fields are marked *