Share this news

ಮಂಗಳೂರು : ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜಕೀಯ ನಿವೃತ್ತಿ ಘೋಷಿಸಿದ್ದ ಸುಳ್ಯ ಬಿಜೆಪಿ ಶಾಸಕ ಎಸ್.ಅಂಗಾರ ತಮ್ಮ ಹೇಳಿಕೆ ಹಿಂಪಡೆದಿದ್ದು, ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಳ್ಳುವ ಮೂಲಕ ಸುಳ್ಯದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಎಸ್.ಅಂಗಾರ ನಿರ್ಧಾರ ಬದಲಿಸಿದ್ದಾರೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಗುಡುಗಿದ್ದ ಎಸ್.ಅಂಗಾರ, ಪ್ರಾಮಾಣಿಕತೆಗೆ ಬೆಲೆ ಇಲ್ಲ ಅಂತ ರಾಜಕೀಯ ನಿವೃತ್ತಿ ಘೋಷಿಸಿದ್ದರು. 

ಬಿಜೆಪಿ ಅಭ್ಯರ್ಥಿ ಭಾಗೀರಥಿ ಪರ ಪ್ರಚಾರ ನಡೆಸಲ್ಲ ಎಂದಿದ್ದರು‌. ಇದೀಗ ಹಿರಿಯ ನಾಯಕರ ಮಾತುಕತೆ ಬಳಿಕ ಅಂಗಾರ ನಿರ್ಧಾರ ಬದಲಿಸಿದ್ದು, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ ಎಂದಿದ್ದೇನೆ. ಸುಳ್ಯದಲ್ಲಿ ಮಾತನಾಡಿದ ಅವರು, ನಾನು ಮೊದಲಿನಂತೆ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ‌. ವೈಯಕ್ತಿಕವಾಗಿ ನೀಡಿದ ಆ ಹೇಳಿಕೆ ಹಿಂದಕ್ಕೆ ಪಡೆಯುತ್ತಿದ್ದೇನೆ. ಆಯ್ಕೆ ಮಾಡಿದ ಅಭ್ಯರ್ಥಿ ಬಗ್ಗೆ ಬೇಸರ ಇಲ್ಲ, ಅವರ ಪರ ಕೆಲಸ ಮಾಡೋದು ನನ್ನ ಹೊಣೆಗಾರಿಕೆ. ನನ್ನ ಕಾರ್ಯಕರ್ತರು ಜೊತೆ ನಿಂತಿದ್ದಕ್ಕೆ ಧನ್ಯವಾದಗಳು‌ ಹೇಳಿದ್ದಾರೆ.

ನನಗೆ ಯಾವುದೇ ಅಸಮಾಧಾನ ಮತ್ತು ಭಿನ್ನಾಭಿಪ್ರಾಯ ಇಲ್ಲ.‌ ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ನಾನು ಬೇಸರದಲ್ಲಿ, ಉದ್ವೇಗದಲ್ಲಿ ಹೇಳಿದ ಮಾತನ್ನು ವಾಪಸ್ಸು ಪಡೆಯುತ್ತೇನೆ. ಮುಂದೆ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಗೆಲ್ಲಿಸುವುದು ನನ್ನ ಗುರಿ ಎಂದಿದ್ದಾರೆ.

Leave a Reply

Your email address will not be published. Required fields are marked *