ಉಡುಪಿ: ಗೆಳೆಯರೊಂದಿಗೆ ಹೊಳೆಯಲ್ಲಿ ಈಜಾಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ಕುಂದಾಪುರ ತಾಲೂಕಿನ ಕೋಣಿ ಕೆಳಾಕೇರಿಯ ಹೊಳೆಯಲ್ಲಿ ನಡೆದಿದೆ .ತಿಲಕ್ (18 ವರ್ಷ) ಹೊಳೆಯಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ.
ತೀರ್ಥಹಳ್ಳಿ ಮೂಲದ ತಿಲಕ್ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ ತಿಲಕ್ ತನ್ನ ಸ್ನೇಹಿತರೊಂದಿಗೆ ಈಜಲು ಹೊಳೆಯಲ್ಲಿ ಇಳಿದಿದ್ದ ವೇಳೆ ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತ ದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.