ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ದ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ.
5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಕ್ಕೆ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಆದಾಯ ಹರಿದು ಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ತನ್ನ ಆಧ್ಯಾತ್ಮಿಕ ಪ್ರಾಮುಖ್ಯತೆಯಿಂದಾಗಿ ನಾಗದೋಷಕ್ಕೆ ಸಂಬಂಧಿಸಿದ ಆಚರಣೆಗಳಿಗೆ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಅದಾಯ ಗಳಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2022ರ ಎಪ್ರಿಲ್ನಿಂದ 2023ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ.