Share this news

ಉಡುಪಿ : ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ .

ಸಾಹಿಲ್ (23 ವರ್ಷ) ಶಿಕ್ಷೆಗೆ ಗುರಿಯಾದ ಆರೋಪಿ ಬೈಂದೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿ ಸಾಗರದಲ್ಲಿ ವಾಸಿಸುತ್ತಿದ್ದಳು. ಆರೋಪಿಯು ಅಲ್ಲಿಯೇ ಇದ್ದ ಬಾಲಕಿಯ ತಂದೆಯ ಹೋಟೆಲ್ ಬಳಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿ ಬಾಲಕಿಗೆ ತಾನು ಆಕೆಯನ್ನು ಪ್ರೀತಿಸುವುದಾಗಿ ಹೇಳಿಕೊಂಡಿದ್ದ. 2021ರ ಜುಲೈನಲ್ಲಿ ಬಾಲಕಿಯು ತನ್ನ ಊರು ಬೈಂದೂರಿಗೆ ಬಂದಿದ್ದು ಆ ಸಮಯ ಆಕೆಯ ಜನ್ಮದಿನದಂದು ಸಾಗರದಿಂದ ಬೈಂದೂರಿಗೆ ಬಂದು ಆರೋಪಿ ಆಕೆಯನ್ನು ರಾತ್ರಿಯ ವೇಳೆ ಹಾಡಿಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ .ಇದೇ ರೀತಿ ಹಲವು ಬಾರಿ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದ.

ಈ ವಿಚಾರ ತಿಳಿದು ಬಾಲಕಿಯ ತಾಯಿ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಪೊಲೀಸ್ ನಿರೀಕ್ಷಕ ಸಂತೋಷ್ ಎ ಕಾಯ್ಕಿಣಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಸಾಂದರ್ಭಿಕ ಸಾಕ್ಷ್ಯವನ್ನು ಪರಿಗಣಿಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 22,500 ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ಬಾಲಕಿಗೆ 1.50 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಟಿ ರಾಘವೇಂದ್ರ ವಾದಿಸಿದ್ದರು.

 

Leave a Reply

Your email address will not be published. Required fields are marked *