ಕಾರ್ಕಳ: ವಿಧಾನಸಭಾ ಚುನಾವಣೆಯಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ಕಾರ್ಕಳದಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಚುನಾವಣಾ ನೋಡಲ್ ಅಧಿಕಾರಿಯಾದ ಗುರುಪ್ರಸಾದ್ ವಾಹನ ಜಾಥಾ ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾನ ಪ್ರತಿಯೊಬ್ಬರ ಹಕ್ಕು, ಪ್ರಜಾತಂತ್ರ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಮತದಾನ ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ, ಹೆಬ್ರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ,ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಕಳ ತಾಲೂಕಿನ ಗ್ರಾಮ ಪಂಚಾಯಿತಿಗಳ ಸ್ವಚ್ಚತಾ ವಾಹನಗಳು ಹಾಗೂ ಸಾರ್ವಜನಿಕರು,ಸರ್ಕಾರಿ ನೌಕರರು ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದರು.