ಕಾರ್ಕಳ: ರಸ್ತೆ, ಕುಡಿಯುವ ನೀರು,ವಿದ್ಯುತ್ ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಕಾರ್ಕಳವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುವಲ್ಲಿ ಶಾಸಕ ಸುನಿಲ್ ಕುಮಾರ್ ಶ್ರಮಿಸಿದ್ದಾರೆ, ಕಳೆದ 5 ವರ್ಷಗಳ ಶಾಸಕತ್ವದ ಅವಧಿಯಲ್ಲಿ ಅವರು ಮಾಡಿರುವ ಸಾಧನೆಗಳನ್ನು ಗುರುತಿಸಿ ಸ್ವರ್ಣ ಕಾರ್ಕಳ ಕಟ್ಟುವಲ್ಲಿ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಮತ್ತೊಮ್ಮೆ ಅವಕಾಶ ಮಾಡಿಕೊಡಬೇಕೆಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಜಂಟೀಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಉದಯ ಕೋಟ್ಯಾನ್, ಸುಮಿತ್ ಶೆಟ್ಟಿ ಮಾತನಾಡಿ,ಕಾರ್ಕಳವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ಬೈಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್,ಕೋಟಿ ಚೆನ್ನಯ್ಯ ಥೀಮ್ ಪಾರ್ಕ್, ನಲ್ಲೂರಿನಲ್ಲಿ ಹರಿಯಪ್ಪನಕೆರೆಯಲ್ಲಿ ವೃಕ್ಷೋದ್ಯಾನವನ, ಸಾಣೂರು ಮಠದಕೆರೆ ಪಾರ್ಕ್ ಸೇರಿದಂತೆ ಹಲವಾರು ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ಇನ್ನುಳಿದಂತೆ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ250 ಕ್ಕೂ ಅಧಿಕ ಕಿಂಡಿ ಅಣೆಕಟ್ಟುಗಳನ್ನು ನಿರ್ಮಾಣ ಮಾಡುವ ಮೂಲಕ ನೀರಾವರಿ ವ್ಯವಸ್ಥೆ ಕಲ್ಪಿಸಲಾಗಿದೆ,ಕಾರ್ಕಳದ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜವಳಿ ಪಾರ್ಕ್, ಓಎಫ್ ಸಿ ಕೇಬಲ್ ಉತ್ಪಾದನಾ ಘಟಕ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಲಾಗಿದ್ದು ಮುಂದಿನ ಅವಧಿಯಲ್ಲಿ ಕಾರ್ಯಾರಂಭವಾಗುವ ಮೂಲಕ ಸಾವಿರಾರು ಉದ್ಯೋಗ ಸೃಷ್ಟಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ರೇಷ್ಮಾ ಉದಯ ಶೆಟ್ಟಿ,ದಿವ್ಯಶ್ರೀ ಅಮೀನ್,ಜ್ಯೋತಿ ಹರೀಶ್ ,ಸಾಣೂರು ನರಸಿಂಹ ಕಾಮತ್ ಉಪಸ್ಥಿತರಿದ್ದರು