ಕಾರ್ಕಳ : ಕೇಂದ್ರದ ನರೇಂದ್ರ ಮೋದಿ ಸರಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಅನುದಾನವನ್ನು ನೀಡಿದೆ. ಆ ಮೂಲಕ ಮಹಿಳೆಯರಿಗೆ ಅರ್ಥಿಕ ನೆರವು ನೀಡುವ ಮೂಲಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಕಾರ್ಕಳ ತಾಲೂಕಿನಾದ್ಯಂತ ಸಾಕಷ್ಟು ಅಭಿವೃದ್ದಿ ಕಾಮಗಾರಿಗಳು ನಡೆದಿದೆ ಎಂದು ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ ಹೇಳಿದರು.
ಅವರು ಕಾರ್ಕಳ ಮಹಿಳಾ ಮೋರ್ಚಾದ ವತಿಯಿಂದ ವಿಕಾಸ ಕಛೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಕೋವಿಡ್ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಸದಸ್ಯರು ಕ್ವಾರೆಂಟೈನ್ ಕೇಂದ್ರಗಳಲ್ಲಿ ಸ್ವಯಂ ಸೇವಕರಾಗಿ ಹಗಲು ಇರುಳು ಶ್ರಮಿಸಿದ್ದಾರೆ. ಸಚಿವ ಸುನಿಲ್ ಕುಮಾರ್ ಅವರು ಕಾರ್ಕಳ ಕ್ಷೇತ್ರಕ್ಕೆ ಬೃಹತ್ ಮೊತ್ತದ ಅನುದಾನವನ್ನು ಒದಗಿಸುವ ಮೂಲಕ ಕಾರ್ಕಳವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದಿದ್ದಾರೆ ಎಂದರು.
ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ ಮಾತನಾಡಿ, ಸುಮಾರು ೪ ಕೋಟಿ ರೂ ನಗರೊತ್ಥಾನದ ಅನುದಾನದಲ್ಲಿ ಪುರಸಭಾ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಅಲ್ಲದೆ ಪುರಸಭಾ ವ್ಯಾಪ್ತಿಯಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ, ರಸ್ತೆ. ಕುಡಿಯುವ ನೀರಿನ ಯೋಜನೆ ಸಹಿತ ಹಲವಾರು ಅಭಿವೃದ್ದಿ ಕಾಮಗಾರಿಗಳು ವಿಶೇಷ ಅನುದಾನದ ಮೂಲಕ ನಡೆದಿದೆ ಎಂದರು.ಆದ್ದರಿಂದ ಅಭಿವೃದ್ಧಿ ಹರಿಕಾರರಾದ ಸುನಿಲ್ ಕುಮಾರ್ ಅವರನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಮೋರ್ಚಾದ ಕಾರ್ಕಳ ತಾಲೂಕು ಉಪಾಧ್ಯಕ್ಷೆ ಜ್ಯೋತಿ ರಮೇಶ್, ಸುಪ್ರಿಯಾ ಶೆಟ್ಟಿ, ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಪುರಸಭಾ ಸದಸ್ಯೆ ಭಾರತಿ ಅಮಿನ್ ಉಪಸ್ಥಿತರಿದ್ದರು.