ಕಾರ್ಕಳ: ವಿಪರೀತ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಕಾಡುಹೊಳೆ ಸೋಮಾರ್ ಜೆಡ್ಡು ನಿವಾಸಿ ಸುಧೀಂದ್ರ ನಾಯ್ಕ್(40) ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸುಧೀಂದ್ರ ನಾಯ್ಕ್ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಸರಿಯಾಗಿ ಕೆಲಸ ಹೋಗದೇ ಕುಡಿತಕ್ಕೆ ಹಣವಿಲ್ಲದೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾಕಷ್ಟು ಕೃಷಿ ಜಮೀನಿದ್ದರೂ ಸರಿಯಾಗಿ ನಿರ್ವಹಣೆ ಮಾಡದೇ ಕೃಷಿ ಆದಾಯವನ್ನು ಕುಡಿತಕ್ಕೆ ಪೋಲು ಮಾಡುತ್ತಿದ್ದರು. ಪತಿ ಮದ್ಯವ್ಯಸನಿಯಾಗಿದ್ದ ಹಿನ್ನಲೆಯಲ್ಲಿ ಅವರ ಪತ್ನಿ ತವರು ಮನೆಯಲ್ಲಿ ನೆಲೆಸಿದ್ದರು ಎನ್ನಲಾಗುತ್ತಿದೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ