ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮೇ.13ರಂದು ಮತಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ . ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲಾಗುತ್ತೆ. 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ದೃಷ್ಟಿಯಿಂದಲೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಹೀಗಾಗಿ ಮತದಾನ ದಿನದ ಒಂದು ದಿನ ಮುಂಚೆಯೇ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಮೇ 13ರಂದು ಫಲಿತಾಂಶ ಇರುವ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಮದ್ಯ ಸಿಗೋದಿಲ್ಲ.

ಮೇ 8 ರಿಂದ 10 ರವರೆಗೂ ಫುಲ್ ಡ್ರೈ ಡೇ. ಮೇ 10 ಎಲೆಕ್ಷನ್ ಮುಗಿಯುವ ತನಕ ಮದ್ಯ ಸರಬರಾಜು ಬಂದ್ ಮಾಡಲಾಗುತ್ತೆ. ನೆರೆಯ ರಾಜ್ಯಗಳಲ್ಲೂ ಮದ್ಯ ಬಂದ್ ಆಗಲಿದೆ. ಕೇರಳ, ಆಂಧ್ರ ಪ್ರದೇಶ, ಗೋವ, ತಮಿಳುನಾಡಿಗೂ ಈಗಾಗಲೇ ಡ್ರೈ ಡೇಗೆ ಅಬಕಾರಿ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮದ್ಯ ಸಿಗದಂತೆ ಕಣ್ಣಿಡಲಾಗುತ್ತೆ. ಎಲೆಕ್ಷನ್ ಮುಗಿದ ಬೆನ್ನಲ್ಲೇ ಕೌಂಟಿಂಗ್ ಗೂ ಡ್ರೈ ಡೇ ಸೂಚಿಸಲಾಗಿದೆ. ಚುನಾವಣೆ ಹಿನ್ನಲೆ ಕಟ್ಟುನಿಟ್ಟಿನ ಕ್ರಮಕ್ಕೆ ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ ಮಾಡಲಾಗಿದೆ. ಎಲ್ಲಾ ಬಾರ್ ರೆಸ್ಟೋರೆಂಟ್, ರಿಟೇಲ್ ಮಾರಾಟ ಮಳಿಗೆಗಳ ಮೇಲೆ ನಿಗಾ ಇಡಲಾಗಿದೆ. ಈಗಾಗಲೇ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್, ಪಬ್ ಗಳಿಗೆ ಮದ್ಯ ಮಾರಾಟವನ್ನು ಸ್ಥಗಿತಗೊಳಿಸುವ ಬಗ್ಗೆ ಸೂಚನೆ ನೀಡಲಾಗಿದೆ. ಫೈ ಸ್ಟಾರ್ ಹೋಟೆಲ್ ನಲ್ಲೂ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಿಯಮ ಉಲ್ಲಂಘಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.


