ಕಾರ್ಕಳ: ಸ್ವಸಹಾಯ ಸಂಘದಿಂದ ಪಡೆದ ಸಾಲ ಮರುಪಾವತಿ ಮಾಡುವ ವಿಚಾರದಲ್ಲಿ ಗಂಡ ಹೆಂಡತಿ ನಡುವೆ ವಾಗ್ವಾದ ನಡೆದು ಮಹಿಳೆ ನೇಣಿಗೆ ಶರಣಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಪತ್ತೊಂಜಿಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಪತ್ತೊಂಜಿಕಟ್ಟೆ ನಿವಾಸಿ ಅಣ್ಣಪ್ಪ ಎಂಬವರ ಪತ್ನಿ ಪುಷ್ಪಾ(23) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಪುಷ್ಪಾ ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದು ಸ್ವಸಹಾಯ ಸಂಘದಿಂದ ಸಾಲ ಪಡೆದುಕೊಂಡಿದ್ದರು. ಅವರ ಪತಿ ಅಣ್ಣಪ್ಪ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದು,ಪ್ರತೀ ವಾರ ಸಂಘದಿಂದ ಪಡೆದ ಸಾಲದ ಕಂತು ಕಟ್ಟಬೇಕಿದ್ದ ಹಿನ್ನೆಲೆಯಲ್ಲಿ ಪುಷ್ಪಾ ಹಣವನ್ನು ಕೊಡುವಂತೆ ಗಂಡನ ಬಳಿ ಕೇಳಿದಾಗ ಪರಸ್ಪರ ವಾಗ್ವಾದ ನಡೆದಿದೆ. ಇದರಿಂದ ನೊಂದ ಪುಷ್ಪಾ ಭಾನುವಾರ ಮುಂಜಾನೆ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ