ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕರ್ನಾಟಕ ಸಾರ್ವಭೌಮತ್ವ ಪದ ಬಳಕೆ ಮಾಡಿ ಟ್ವಿಟ್ ಮಾಡಿದ್ದರಿಂದಾಗಿ, ಕೇಂದ್ರ ಚುನಾವಣಾ ಆಯೋಗಕ್ಕೆ ಬಂದ ದೂರಿನ ಹಿನ್ನಲೆಯಲ್ಲಿ, ಇದೀಗ ಆಯೋಗವು ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ಎಐಸಿಸಿ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಿರುವ ಕೇಂದ್ರ ಚುನಾವಣಾ ಆಯೋಗವು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ‘ಕರ್ನಾಟಕ ಸಾರ್ವಭೌಮತ್ವ’ ಹೇಳಿಕೆ ಸಂಬಂಧ ಅನೇಕ ದೂರುಗಳು ಬಂದಿವೆ ಎಂದಿದೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಹಾಕಲಾಗಿರುವ ಮತ್ತು ಸಿಪಿಪಿ ಅಧ್ಯಕ್ಷರಿಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ಮತ್ತು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತದ ಚುನಾವಣಾ ಆಯೋಗವು ಕಾಂಗ್ರೆಸ್ ಅಧ್ಯಕ್ಷರಿಗೆ ಪತ್ರ ಬರೆದಿದೆ.