ಉಡುಪಿ: ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು ಈಗಾಗಲೇ ಕಾರ್ಕಳ ಮತ ಕ್ಷೇತ್ರದ 9ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಸುನಿಲ್ ಕುಮಾರ್ 1966 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಸುನಿಲ್ ಕುಮಾರ್ 44772 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ 42806 ಮತಗಳನ್ನು ಪಡೆದಿದ್ದು ತೀವೃ ಪೈಪೋಟಿ ನೀಡುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ 2825 ಮತಗಳನ್ನು ಪಡೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ.
ಆರಂಭದಲ್ಲಿ ಮುನ್ನಡೆಯನ್ನು ಹೆಚ್ಚಿನ ಅಂತರದಲ್ಲಿ ಕಾಯ್ದುಕೊಂಡು ಬಂದಿದ್ದ ಸುನಿಲ್ ಕುಮಾರ್ ಮುನ್ನಡೆಯ ಅಂತರ ಕಡಿಮೆಯಾಗುತ್ತಿದ್ದು ಬಿಜೆಪಿ ಕಾರ್ಯಕರ್ತರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.