ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ.
ರಾಜ್ಯ ಮಾತ್ರವಲ್ಲದೆ. ಈಡಿ ದೇಶವೇ ಕಾಯುತ್ತಿದ್ದ, ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರವಾದ ಉಳ್ಳಾಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಗೆದ್ದಿದ್ದಾರೆ.
ಇನ್ನೂ ಜೆಡಿಎಸ್ ಅಭ್ಯರ್ಥಿ ಮೊಯಿನುದ್ದೀನ್ ಬಾವಾ ಈ ಬಾರಿ ಉಳ್ಳಾಲದ ಪ್ರಬಲ ಸ್ಪರ್ಧಿಲಾಗಿದ್ದು ಸೋತಿದ್ದಾರೆ. ಇನ್ನೂ ಬಿಜೆಪಿಯಲ್ಲಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಸ್ಪರ್ಧಿಸುತ್ತಿದ್ದು ಅವರು ಸೋತಿದ್ದಾರೆ. ಮತ್ತೆ 5ನೇ ಬಾರಿಗೆ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.