ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಎದುರಾಗಿದ್ದು, ಸಚಿವ ಶ್ರೀರಾಮುಲು, ಸಚಿವ ಸುಧಾಕರ್, ಮುನಿರತ್ನ ಸೇರಿದಂತೆ ಹಲವು ಸಚಿವರು ಸೋಲನುಭವಿಸಿದ್ದಾರೆ.
ಬಳ್ಳಾರಿ ಗ್ರಾಮೀಣಾ ಕ್ಷೇತ್ರದಲ್ಲಿ ಬಿ. ಶ್ರೀರಾಮುಲು ಭಾರೀ ಅಂತರದಿಂದ ಸೋಲನುಭವಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಡಾ.ಕೆ.ಸುಧಾಕರ್ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಹಿರೇಕೆರೆರೂ ಕ್ಷೇತ್ರದಲ್ಲಿ ಸಚಿವ ಬಿ.ಸಿ.ಪಾಟೀಲ್ ಸೋಲನುಭವಿಸಿದ್ದಾರೆ. ಹಿರೇಕೆರೆರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಬಿ. ಬಣಕಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿರಸಿ ಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲನುಭವಿಸಿದ್ದಾರೆ.
ಸ್ಪಷ್ಟ ಬಹುಮತವನ್ನು ಪಡೆದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ಈಗ ಸರ್ಕಾರ ರಚನೆಯ ಕಸರತ್ತು ಆರಂಭಗೊಂಡಿದೆ. ಇದಕ್ಕಾಗಿ ನಾಳೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಸಿಎಂ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ.
ಈ ಕುರಿತಂತೆ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ತಿಳಇದು ಬಂದಿದ್ದು, ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಸಲಾಗುತ್ತದೆ.
ಕಾಂಗ್ರೆಸ್ ಪಕ್ಷದ ಸಿಎಂ ರೇಸ್ ನಲ್ಲಿ ಸಿದ್ಧರಾಮಯ್ಯ ವರ್ಸಸ್ ಡಿಕೆ ಶಿವಕುಮಾರ್ ನಡುವೆ ಒಳಗೊಳಗೆ ಫೈಟ್ ನಡೆಯುತ್ತಿದೆ ಎನ್ನಲಾಗುತ್ತಿದೆ. ಆದ್ರೇ ಈ ಬಗ್ಗೆ ನಾಳೆ ನಡೆಯಲಿರುವಂತ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ಪಷ್ಟ ಮಾಹಿತಿ ಹೊರ ಬೀಳಲಿದೆ.
ಈವರೆಗೆ ದೊರೆತ ಮಾಹಿತಿಯಂತೆ ಬಿಜೆಪಿ 65, ಕಾಂಗ್ರೆಸ್ 132, ಜೆಡಿಎಸ್ 21 ಹಾಗೂ ಇತರೆ 6 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸಲಾಗಿದೆ. ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ. ಆ ಬಗ್ಗೆ ಚುನಾವಣಾ ಆಯೋಗವು ಅಧಿಕೃತ ಘೋಷಣೆ ಮಾಡುವುದು ಬಾಕಿ ಇದೆ.