ಕಾರ್ಕಳ: ಬಾವಿಯನ್ನು ಸ್ವಚ್ಛಗೊಳಿಸಲು ಬಾವಿಗೆ ಇಳಿದಿದ್ದ ವ್ಯಕ್ತಿ ಮೇಲೆ ಬರಲಾಗದೇ ಪರದಾಡುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಎಂಬಲ್ಲಿ ರಮೇಶ್ ಆಚಾರ್ಯ(40) ಎಂಬವರು ಗುರುವಾರ ಬಾವಿಯ ಸ್ವಚ್ಛತೆಗೆ ಇಳಿದಿದ್ದರು. ಬಾವಿ ಸ್ವಚ್ಛಗೊಳಿಸಿದ ಬಳಿಕ ಮೇಲಕ್ಕೆ ಬರಲು ಸಾಧ್ಯವಾಗದೇ ಇದ್ದಾಗ ಮನೆಯವರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬಾವಿಯಲ್ಲಿದ್ದ ವ್ಯಕ್ತಿಯನ್ನು ಬಾವಿಯಿಂದ ಮೇಲೆಕ್ಕೆತ್ತಿ ರಕ್ಷಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಿಬ್ಬಂದಿಗಳಾದ ಹರಿಪ್ರಸಾದ್ ಶೆಟ್ಟಿಗಾರ್ ,ಜಯ ಮೂಲ್ಯ ,ಸುರೇಶ್ ಕುಮಾರ್ ,ವಿನಾಯಕ ಪಾಲ್ಗೊಂಡಿದ್ದರು