ಬೆಂಗಳೂರು:ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಪ್ರಮಾಣ ವಚನ ಮಾಡಲಿದ್ದು ಇವರ ಜತೆಗೆ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ 8 ಜನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು,8 ರಾಜ್ಯಗಳ ಸಿಎಂ ಗಳು ಸಿದ್ದರಾಮಯ್ಯ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ನಡುವೆ ಮಂತ್ರಿಗಿರಿಗಾಗಿ ಭಾರೀ ಲಾಬಿ ನಡೆಸುತ್ತಿದ್ದು ಶಾಸಕರುಗಳಿಗೆ ಭಾರೀ ನಿರಾಸೆ ಯಾಗಿದೆ,ಯಾಕೆಂದರೆ 26 ರಿಂದ 28 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡುವ ವಿಚಾರದಲ್ಲಿ ನಿನ್ನೆ ಚರ್ಚೆ ನಡೆದಿತ್ತು. ಆದರೆ ನಾಯಕರ ನಡುವೆ ಗೊಂದಲ ಮುಂದುವರಿದ ಹಿನ್ನಲೆಯಲ್ಲಿ ಸದ್ಯಕ್ಕೆ ದೊಡ್ಡ ಸಂಖ್ಯೆಯ ಸಂಪುಟವನ್ನು ಹೈಕಮಾಂಡ್ ಕೈ ಬಿಟ್ಟಿದೆ. ಜಮೀರ್ ಅಹಮದ್ ಖಾನ್ ಸೇರಿದಂತೆ 8 ಮಂದಿ ಸಚಿವರ ಪಟ್ಟಿ ಅಂತಿಮವಾಗಿದೆ.
ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರು
ಎಂ.ಬಿ. ಪಾಟೀಲ್
ಡಾ.ಜಿ. ಪರಮೇಶ್ವರ
ಕೆ.ಎಚ್.ಮುನಿಯಪ್ಪ
ಕೆ.ಜೆ. ಜಾರ್ಜ್
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
ಜಮೀರ್ ಅಹಮದ್ ಖಾನ್
ರಾಮಲಿಂಗ ರೆಡ್ಡಿ
ಮೊದಲ ಸಚಿವ ಸಂಪುಟದಲ್ಲಿ ಆರು ಸಮುದಾಯಕ್ಕೆ ಅವಕಾಶ:
ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಆರು ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಐದು ಸಮುದಾಯಕ್ಕೆ ಒಂದೊಂದು ಸಚಿವ ಸ್ಥಾನ, ದಲಿತ ಸಮುದಾಯಕ್ಕೆ ಮೂರು ಸ್ಥಾನ, ಅದರಲ್ಲಿ ದಲಿತ ಬಲ ಸಮುದಾಯಕ್ಕೆ ಎರಡು, ದಲಿತ ಎಡ ಸಮುದಾಯಕ್ಕೆ ಒಂದು ಸಚಿವ ಸ್ಥಾನ ನೀಡಲಾಗಿದೆ.