ಉಡುಪಿ :ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಉಡುಪಿ ಕ್ಷೇತ್ರದ ಮಾಜಿ ಶಾಸಕ ಯು.ಆರ್.ಸಭಾಪತಿ(71) ತೀವೃ ಅನಾರೋಗ್ಯದಿಂದ ಭಾನುವಾರ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71ರ ಹರೆಯದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಉಡುಪಿಯ ತಮ್ಮ ನಿವಾಸದಲ್ಲಿ ನಿಧನರಾದರು
ಕರಾವಳಿ ಕ್ಷೇತ್ರದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಯು.ಆರ್.ಸಭಾಪತಿ, ಉಡುಪಿಯಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1999ರಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು. ಬಳಿಕ 2004ರ ವಿಧಾನಸಭೆ ಚುನಾವಣೆಯಲ್ಲಿ ರಘುಪತಿ ಭಟ್ ವಿರುದ್ಧ ಸೋತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಭಾಪತಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.