ಬೆಂಗಳೂರು : ಮುಂದಿನ 5 ವರ್ಷವೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂಬ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದು, ಪಕ್ಷದ ವರಿಷ್ಠರು ಏನು ಹೇಳಿದ್ದಾರೋ ಅದನ್ನೇ ಹೇಳಿದ್ದೇನೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಆಗಿರುತ್ತಾರೆ. ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ವೇಣುಗೋಪಾಲ್ ಏನು ಹೇಳಿದ್ದಾರೋ ಅದನ್ನೇ ನಾನು ಹೇಳಿದ್ದೆ. ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ನನಗೆ ಗೊತ್ತಿಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ ಪವರ್ ಶೇರಿಂಗ್ ಇದ್ದರೆ ಜನರ ಜೊತೆ ಮಾತ್ರ ಅಂತಾ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದಿದ್ದರು.
ಖಾತೆ ಹಂಚಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡಬೇಕು. ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.