ಕಾರ್ಕಳ : ತಾಲೂಕಿನ ದುರ್ಗ ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯದ ಸಹಯೋಗದಲ್ಲಿ ಮಕ್ಕಳ ಬೇಸಿಗೆ ಶಿಬಿರವು ಜರುಗಿತು.
ದುರ್ಗ ಪಂಚಾಯತ್ ಅಧ್ಯಕ್ಷ ಸತೀಶ್ ನಾಯಕ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಮಾನಂದ ಪೂಜಾರಿ, ಅಭಿವೃದ್ಧಿ ಅಧಿಕಾರಿ ಮಂಜು, ಗ್ರಂಥಪಾಲಕಿ ಶ್ವೇತಾ ಉಪಸ್ಥಿತರಿದ್ದರು.
ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.