ಬೆಳ್ತಂಗಡಿ : 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ ಮಾಡಿದ ಭಾಷಣದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿ ಯಡವಟ್ಟು ಮಾಡಿಕೊಂಡಿದ್ದಾರೆ. ಬೆಳ್ತಂಗಡಿಯ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಯಲ್ಲಿ ಸಿಎಂ ವಿರುದ್ಧ ಕೊಲೆ ಆರೋಪವನ್ನು ಶಾಸಕ ಹರೀಶ್ ಪೂಂಜಾ ಮಾಡಿದ್ದಾರೆ.
ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಶಾಸಕ ಪೂಂಜಾ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರ ಬಗ್ಗೆ ಗರಂ ಆಗಿದ್ದರು. ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ. 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು. ಇದೀಗ ಬಿಜೆಪಿ ಶಾಸಕನ ಆರೋಪ ವಿವಾದಕ್ಕೆ ಕಾರಣವಾಗಿದ್ದು, ದೂರು ದಾಖಲಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ